Read Bible

Free to use • No login or registration required • For all ages

Choose your language, version, book, and chapter below. You can optionally pick a single verse for a focused view. Then click Go to see the passage. Need help? See our How to use guide.

1 Samuel 5

1. ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ

2. ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.

3. ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.

4. ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;

5. ಆದ್ದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ಮತ್ತು ದಾಗೋನನ ಮನೆಗೆ ಬರುವವರೆಲ್ಲರೂ ಅಷ್ಡೋದಿನ ಗುಡಿಯ ಹೊಸ್ತಿಲನ್ನು ಇಂದಿಗೂ ತುಳಿಯದಿರುವುದಕ್ಕೆ ಇದೇ ಕಾರಣ.

6. ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.

7. ಅಷ್ಡೋದಿನ ಜನರು ಅದನ್ನು ನೋಡಿ, “ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ” ಎಂದು ಹೇಳಿ

8. ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.

9. ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.

10. ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.

11. ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.

12. ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.